spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೋವಿಡ್ ಪಾಸಿಟಿವ್ ಶೇಕಡಾ 10ಕ್ಕಿಂತ ಹೆಚ್ಚು ಇರುವ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಮತ್ತೆ ಹೆಚ್ಚುತ್ತಿದ್ದು, ಕಳೆದ ಕೆಲವು ವಾರಗಳಿಂದ ಶೇಕಡಾ 10ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಮಾಣ ವರದಿಯಾಗುತ್ತಿರುವ ಜಿಲ್ಲೆಗಳಲ್ಲಿ ಜನರ ಚಲನವಲನ ಮತ್ತು ಜನಸಂದಣಿಯನ್ನು ತಡೆಯಲು ಅಥವಾ ಕಡಿಮೆ ಮಾಡಲು ಕಠಿಣ ನಿರ್ಬಂಧಗಳನ್ನು ಪರಿಗಣಿಸಬೇಕು ಎಂದು ಕೇಂದ್ರ ಸರ್ಕಾರ 10 ರಾಜ್ಯಗಳಿಗೆ ಸೂಚಿಸಿದೆ.
ಕೇರಳ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಒಡಿಶಾ, ಅಸ್ಸಾಂ, ಮಿಜೋರಾಂ, ಮೇಘಾಲಯ, ಆಂಧ್ರಪ್ರದೇಶ ಮತ್ತು ಮಣಿಪುರದ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು.
ದೇಶದ 46 ಜಿಲ್ಲೆಗಳಲ್ಲಿ ಶೇಕಡಾ 10 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದು, ಇನ್ನೂ 53 ಜಿಲ್ಲೆಗಳಲ್ಲಿ ಶೇ. ಐದರಿಂದ 10ರಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ರಾಜ್ಯ ಸರ್ಕಾರಗಳು ಕೋವಿಡ್ -19 ಪತ್ತೆಗಾಗಿ ಪರೀಕ್ಷೆಯನ್ನು ಹೆಚ್ಚಿಸಬೇಕು. ಈ ಹಂತದಲ್ಲಿ ಯಾವುದೇ ನಿರ್ಬಂಧಗಳನ್ನು ಸಡಿಲಸಬಾರದು. ಇಲ್ಲದಿದ್ದರೆ ಈ ಜಿಲ್ಲೆಗಳಲ್ಲಿ ಪರಿಸ್ಥಿತಿ ಹದಗೆಡುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.
ಈ ೧೦ ರಾಜ್ಯಗಳಲ್ಲಿ ಆರೋಗ್ಯ ಅಧಿಕಾರಿಗಳು ಕೋವಿಡ್ ಕಣ್ಗಾವಲು, ನಿಯಂತ್ರಣ ಮತ್ತು ನಿರ್ವಹಣೆಗೆ ತೆಗೆದುಕೊಂಡ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಸಹ ಪರಿಶೀಲಿಸಲಾಯಿತು. ಈ ರಾಜ್ಯಗಳು ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ ಅಥವಾ ಪಾಸಿಟಿವ್ ಪ್ರಮಾಣ ಏರಿಕೆಯಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss