ನೂತನ ಕುಸ್ತಿ ಫೆಡರೇಶನ್‌ ಸಮಿತಿಯನ್ನೇ ಅಮಾನತುಗೊಳಿಸಿದ ಕೇಂದ್ರ ಕ್ರೀಡಾ ಸಚಿವಾಲಯ

 ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸದಾಗಿ ರಚಿಸಲಾದ ಸಂಜಯ್‌ ಸಿಂಗ್ (Sanjay Singh) ನೇತೃತ್ವದ ಭಾರತೀಯ ಕುಸ್ತಿ ಫೆಡರೇಶನ್‌ (Wrestling Federation of India) ಸಮಿತಿಯನ್ನು ಕ್ರೀಡಾ ಸಚಿವಾಲಯ (Sports Ministry) ಅಮಾನತುಗೊಳಿಸಿದೆ.

ಪಾರದರ್ಶಕತೆ ಹಾಗೂ ಇತರ ಸಮಸ್ಯೆಗಳ ಹಿನ್ನೆಲೆಯಲ್ಲಿ ಸಂಜಯ್ ಸಿಂಗ್ ನೇತೃತ್ವದಲ್ಲಿ ಹೊಸದಾಗಿ ರಚಿಸಲಾದ WFI ಸಂಸ್ಥೆಯನ್ನು ಅಮಾನತು ಮಾಡಲಾಗಿದೆ.
ಹೊಸದಾಗಿ ಆಯ್ಕೆಯಾದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಸಂಜಯ್ ಸಿಂಗ್ U-15 ಮತ್ತು U-20 ರಾಷ್ಟ್ರೀಯ ಪಂದ್ಯಗಳನ್ನು ಗೊಂಡಾದಲ್ಲಿ ನಡೆಸಲಾಗುವುದು ಎಂದು ಘೋಷಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಕುಸ್ತಿಪಟುಗಳು ತಯಾರಾಗಲು ಕನಿಷ್ಠ 15 ದಿನಗಳ ಸೂಚನೆ ಅಗತ್ಯವಿದೆ. ಯಾವುದೇ ಟೂರ್ನಿ ನಡೆಸುವ ಮೊದಲು ಕಾರ್ಯಕಾರಿ ಸಮಿತಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕು. ಹೊಸದಾಗಿ ಚುನಾಯಿತ ಸಮಿತಿಯು ಕ್ರೀಡಾ ಸಂಹಿತೆಯನ್ನು ಕಡೆಗಣಿಸಿ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದೆ.

ಗೊಂಡಾದಲ್ಲಿ ಸ್ಪರ್ಧೆ ಆಯೋಜನೆಗೊಂಡಿದ್ದಕ್ಕೆ ಸಾಕ್ಷಿ ಮಲ್ಲಿಕ್‌ ಕಿಡಿಕಾರಿದ್ದರು. ಕಿರಿಯರ ಕುಸ್ತಿಯನ್ನು ಗೊಂಡಾದಲ್ಲಿ ನಡೆಸಲು WFI ಮುಂದಾಗಿದೆ. ಗೊಂಡಾ ಬ್ರಿಜ್‌ಭೂಷಣ್‌ ಸರಣ್‌ ಸಿಂಗ್‌ (Brijbhushan) ಅವರ ಕ್ಷೇತ್ರ ಎಂದು ಹೇಳಿದ್ದರು.

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ವಿರೋಧಿಸಿ ಸಾಕ್ಷಿ ಮಲ್ಲಿಕ್ ಕಣ್ಣೀರಿನೊಂದಿಗೆ ವಿದಾಯ ಹೇಳಿದ್ದರು. ಬಜರಂಗ ಪೂನಿಯಾ ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿದ್ದರು. ಗೂಂಗಾ ಪೈಲ್ವಾನ್ ಖ್ಯಾತಿಯ ಕುಸ್ತಿಪಟು ವೀರೇಂದರ್ ಸಿಂಗ್ ಕೂಡ ಪದ್ಮಶ್ರೀ ಪ್ರಶಸ್ತಿಯನ್ನು ಸರ್ಕಾರಕ್ಕೆ ಹಿಂತಿರುಗಿಸುವುದಾಗಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಕುಸ್ತಿ ಫೆಡರೇಶನ್ ಆಫ್ ಇಂಡಿಯಾವನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!