ಭೀಕರ ರಸ್ತೆ ಅಪಘಾತ: ಕಣಿವೆಗೆ ಉರುಳಿದ ವಾಹನ, ಆರು ಮಂದಿ ಕಣ್ಮರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಾಹನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದಿದೆ. ಸೋನ್‌ಪ್ರಯಾಗದಿಂದ ರಿಷಿಕೇಶಕ್ಕೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ವೇಳೆ ವಾಹನದಲ್ಲಿ 11 ಮಂದಿ ಪ್ರಯಾಣಿಕರಿದ್ದು, ಮಾಹಿತಿ ತಿಳಿದ ತಕ್ಷಣ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಐವರನ್ನು ರಕ್ಷಿಸಿದ್ದಾರೆ.

ಉಳಿದ ಆರು ಮಂದಿ ನಾಪತ್ತೆಯಾಗಿದ್ದಾರೆ. ಭಾರೀ ಮಳೆಯಿಂದಾಗಿ, ಬೆಟ್ಟ-ಗುಡ್ಡಗಳಿಂದ ಬಂಡೆಗಳು ಉರುಳಿದವು.

ಬಂಡೆಯನ್ನು ತಪ್ಪಿಸುವ ಪ್ರಯತ್ನದಲ್ಲಿ ಮ್ಯಾಕ್ಸ್ ವಾಹನ ನಿಯಂತ್ರಣ ತಪ್ಪಿದೆ. ರಸ್ತೆಯಿಂದ ಕಣಿವೆಯಲ್ಲಿ ಹರಿಯುವ ನದಿಗೆ ಬಿದ್ದಿದ್ದು, ವಾಹನ ಚಾಲಕ ಸೇರಿ ಆರು ಮಂದಿ ನಾಪತ್ತೆಯಾಗಿದ್ದಾರೆ. ರಕ್ಷಣಾ ಸಿಬ್ಬಂದಿ ಐವರನ್ನು ರಕ್ಷಿಸಿ ರಿಷಿಕೇಶ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!