Sunday, April 11, 2021

Latest Posts

ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಅರಿಯಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಪೂರಕ

ಹೊಸ ದಿಗಂತ ವರದಿ, ಶಿವಮೊಗ್ಗ:

ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಮತ್ತು ಬಗೆಹರಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ
ಉತ್ತಮ ಅವಕಾಶವಾಗಿದ್ದು, ಎಲ್ಲಾ ಇಲಾಖೆಗಳು ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
ಶನಿವಾರ ಶಿಕಾರಿಪುರ ತಾಲೂಕಿನ ಉಡುಗಣಿ ಹೋಬಳಿಯ ತಡಸನಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಕಂದಾಯ ಇಲಾಖೆಯ ಮುಖ್ಯ ಜವಾಬ್ದಾರಿಯಾಗಿದೆ. ಇದರೊಂದಿಗೆ ಪಂಚಾಯತ್‍ರಾಜ್ ಇಲಾಖೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮನ್ವಯ ಮಾಡಿಕೊಂಡು ಗ್ರಾಮೀಣ ಭಾಗದ ಜನಜೀವನವನ್ನು ಉತ್ತಮಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪ್ರತಿ ಹೋಬಳಿಯಲ್ಲಿರುವ ಗ್ರಾಮಗಳ ಸಮಸ್ಯೆಗಳು ಬಹುತೇಕ ಒಂದೇ ರೀತಿಯಾಗಿರುತ್ತದೆ. ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದರೂ, ಆಯಾ ಹೋಬಳಿಯ ಸಮಸ್ಯೆಗಳನ್ನು ಅರಿಯಲು ಇದರಿಂದ ಸಾಧ್ಯವಾಗುತ್ತದೆ ಎಂದರು.

ಅದ್ಧೂರಿ ಸ್ವಾಗತ 
ಬೆಳಿಗ್ಗೆ 11ಗಂಟೆಗೆ ಗ್ರಾಮ ಪ್ರವೇಶಿಸಿದ ಜಿಲ್ಲಾಧಿಕಾರಿಯನ್ನು ಗ್ರಾಮಸ್ಥರು, ಡೊಳ್ಳು, ಪಟಾಕಿಯೊಂದಿಗೆ ಅದ್ದೂರಿ ಸ್ವಾಗತಿಸಿ ಮೆರವಣಿಗೆ ಮೂಲಕ ಗ್ರಾಮದ ಶಾಲೆಗೆ ಕರೆ ತಂದರು.
ಶಾಲೆಯ ಆವರಣದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಉದ್ಘಾಟಿಸಿದರು. ಸಾಮಾನ್ಯ ಆರೋಗ್ಯ ತಪಾಸಣೆ ಮಾತ್ರವಲ್ಲದೆ ಕಣ್ಣು, ಕಿವಿ, ಚರ್ಮ ಇತ್ಯಾದಿ ತಪಾಸಣೆಗೂ ಇಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ತಾಲೂಕಿನ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿದ್ದರು.
ಆರೋಗ್ಯ ಕರ್ನಾಟಕ ಯೋಜನೆಯಡಿ ಸ್ಥಳದಲ್ಲಿಯೇ ಕಾರ್ಡ್ ಮುದ್ರಿಸಿ ನೀಡುವ ಸೌಲಭ್ಯವನ್ನು ಸಹ ಕಲ್ಪಿಸಲಾಗಿತ್ತು. ಶಾಲಾ ಕೊಠಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು 6ಮತ್ತು 7ನೇ ತರಗತಿಯ ಮಕ್ಕಳೊಂದಿಗೆ ಶಿಕ್ಷಕರಾಗಿ ಬೆರೆತರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss