ಮತಗಟ್ಟೆ ರಣರಂಗ: ಮತಯಂತ್ರಗಳನ್ನು ಒಡೆದು ಪೀಸ್‌ ಪೀಸ್‌ ಮಾಡಿದ ಗ್ರಾಮಸ್ಥರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಾಂತಿಯುತವಾಗಿ ನಡೆಯಬೇಕಿದ್ದ ಚುನಾವಣಾ ಮತಗಟ್ಟೆ ರಣರಂಗವಾಗಿ ಮಾರ್ಪಟ್ಟಿದೆ. ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಬೇಕಿದ್ದ ಮತದಾರರು ಮತಗಟ್ಟೆಗೆ ತೆರಳಿ ವಿಧ್ವಂಸ ಸೃಷ್ಟಿಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ನಡೆದಿದೆ.

ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪೀಸ್‌ ಪೀಸ್ ಮಾಡಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರು  ಕಾಯ್ದಿರಿಸಲಾಗಿದ್ದ ಇವಿಎಂ ಯಂತ್ರ ಹಾಗೂ ವಿವಿಪ್ಯಾಟ್ ಮಶೀನ್‌ಗಳನ್ನು ಒಡೆದು ಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!