ಹೊಸದಿಗಂತ ವರದಿ, ಮಡಿಕೇರಿ
ಈಜಲು ತೆರಳಿದ್ದ ಯುವಕ ನೀರು ಪಾಲಾದ ಘಟನೆ ಕುಶಾಲನಗರ ಸಮೀಪದ ಆವರ್ತಿ ಗ್ರಾಮದಲ್ಲಿ ನಡೆದಿದೆ.
ಆವರ್ತಿ ನಿವಾಸಿ ದರ್ಶನ್ ಮೃತ ದುರ್ದೈವಿ ಯುವಕ. ಸ್ನೇಹಿತರೊಂದಿಗೆ ಕಾವೇರಿ ನದಿಗೆ ಈಜಲು ತೆರಳಿದ್ದ ಸಂದರ್ಭ ಯುವಕರ ತಂಡ ನೀರಿನ ಸೆಳೆತಕ್ಕೆ ಸಿಲುಕಿದ್ದು, ಈ ಸಂದರ್ಭ ಸ್ಥಳೀಯರು ಮೂವರನ್ನು ರಕ್ಷಿಸಿದ್ದಾರೆ. ಆದರೆ ದರ್ಶನ್ ಮಾತ್ರ ನೀರು ಪಾಲಾಗಿರುವುದಾಗಿ ಹೇಳಲಾಗಿದೆ.
ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ದರ್ಶನ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ