ದೇಶದಲ್ಲಿ ಬುರ್ಖಾ ನಿಷೇಧವಾಗಬೇಕು: ರಿಷಿಕುಮಾರಸ್ವಾಮಿ

ಹೊಸದಿಗಂತ ವರದಿ, ಮೈಸೂರು:
ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ಮಾದರಿಯಲ್ಲೇ ಕಾನೂನಾತ್ಮಕವಾಗಿ ಕೆಡವಬೇಕು ಎಂದು ಹೇಳಿಕೆ ನೀಡಿದ್ದ ರಿಷಿಕುಮಾರಸ್ವಾಮಿ, ಇದೀಗ ತ್ರಿವಳಿ ತಲಾಖ್ ರದ್ದುಪಡಿಸಿದಂತೆ, ದೇಶದಲ್ಲೇ ಹಿಜಾಬ್ (ಬುರ್ಖಾ) ಧರಿಸುವುದನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬAಧಿಸಿದAತೆ ಪ್ರತಿಕ್ರಿಯಿಸಿ, ರಾಜ್ಯ, ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಶಾಲೆಗೆ ಬುರ್ಖಾ ಧರಿಸಿ ಬಂದರೆ ಗುರುತು ಪತ್ತೆಯಾಗುವುದಿಲ್ಲ. ವಿದ್ಯಾರ್ಥಿನಿಯೇ ಬರುತ್ತಾರೋ, ಇಲ್ಲ ಅವರ ಅಕ್ಕ -ತಂಗಿ- ಅಮ್ಮ ಬರುತ್ತಾರೋ ಹೇಗೆ ಗೊತ್ತಾಗುತ್ತದೆ? ಪರೀಕ್ಷೆ ಯಾರು ಬರೆಯುತ್ತಾರೆ ಅನ್ನೋದು ಹೇಗೆ ಗೊತ್ತಾಗುತ್ತದೆ? ಮನೆಯಲ್ಲಿ ತಂದೆ- ತಾಯಿ ಇದ್ದಂತೆ ಶಾಲೆಯಲ್ಲಿ ಶಿಕ್ಷಕರು ಇರುತ್ತಾರೆ. ಸಹಪಾಠಿಗಳು ಸಹೋದರರಂತೆ ಅವರನ್ನು ಅನುಮಾನಿಸದರೆ ಹೇಗೆ? ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!