WEATHER | ರಾಜ್ಯವೆಲ್ಲಾ ಕೂಲ್‌ ಕೂಲ್‌, ಇಂದು ಎಲ್ಲೆಲ್ಲ ವರ್ಷಧಾರೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಒಣಹವೆ ಮತ್ತು ಮಳೆಯ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲ ಜಿಲ್ಲೆಗಳಲ್ಲಿ ಮಳೆಯ ಸಿಂಚನ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ ಆಗಮನವಾಗಿದ್ದು, ರಾಜ್ಯವೆಲ್ಲ ಕೂಲ್‌ ಕೂಲ್‌ ಆಗಿದೆ.

ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಿಗೆ ಸದ್ಯ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಮುಂದಿನ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣದ ಜಿಲ್ಲೆಗಳ ಕೆಲ ಪ್ರದೇಶಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಕೆಲ ಕಡೆ ಚದುರಿದಂತೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗುವ ಮುನ್ಸೂಚನೆಯನ್ನೂ ಹವಾಮಾನ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!