ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಇಂದು 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ರಾಜಭವನದಲ್ಲಿ ಯೋಗ ಪ್ರದರ್ಶಿಸಿದರು.
ಸಿಎಂ ಯೋಗಿ ರಾಜ್ಯದ ಸಮಸ್ತ ಜನತೆಗೆ ಅಭಿನಂದನೆ ಸಲ್ಲಿಸಿದ್ದು, ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಡೀ ವಿಶ್ವವೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿದೆ ಎಂದರು.
“ರಾಜಭವನದಲ್ಲಿ ನಡೆಯುತ್ತಿರುವ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಈ ಕಾರ್ಯಕ್ರಮಕ್ಕೆ ನಿಮ್ಮೆಲ್ಲರಿಗೂ ಸ್ವಾಗತ. ಇಂದು ದೇಶಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿದೆ. 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ನಾನು ಇಡೀ ರಾಜ್ಯದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇಂದು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಇಡೀ ವಿಶ್ವವೇ ಒಟ್ಟಾಗಿ ಸೇರಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿರುವುದು ಮಾನವೀಯತೆಯನ್ನು ತೋರಿಸುತ್ತದೆ ಎಂದು ಹೇಳಿದರು.
ಯೋಗವು ಜನರನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಂಪರ್ಕಿಸುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.