ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಲಿಗಢದಲ್ಲಿ ಯುವಕನೊಬ್ಬ ಪೊಲೀಸ್ ಠಾಣೆ ಆವರಣದಲ್ಲೇ ತನ್ನ ತಾಯಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಸಂಬಂಧಿ ಜತೆಗಿನ ಆಸ್ತಿ ವಿವಾದದಿಂದ ತಾಯಿ ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ್ದಾನೆ.
ಆದರೆ ವೀಡಿಯೋ ಕಣ್ಗಾವಲು ಯುವಕ ತನ್ನ ತಾಯಿಗೆ ಬೆಂಕಿ ಹಚ್ಚುತ್ತಿರುವುದು ಸೆರೆಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಯುವಕನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಈ ಘಟನೆ ಮಂಗಳವಾರ ಖೈರ್ ಪೊಲೀಸ್ ಪ್ರದೇಶದಲ್ಲಿ ನಡೆದಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿ ಮಹಿಳೆ ಮತ್ತು ಆಕೆಯ ಮಗ ಪೊಲೀಸರ ಮೊರೆ ಹೋಗಿದ್ದರು. ಸ್ವಲ್ಪ ಸಮಯದ ನಂತರ, ಮಹಿಳೆ ಮತ್ತು ಆಕೆಯ ಮಗ ಪೊಲೀಸ್ ಠಾಣೆಯಿಂದ ಹೊರಬಂದು ಆವರಣದೊಳಗಿನ ನಿರ್ಜನ ಸ್ಥಳಕ್ಕೆ ತೆರಳಿದರು. ಮಹಿಳೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕಲು ಪ್ರಾರಂಭಿಸಿದಳು.
ಮಹಿಳೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದಾಗ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯ ಕಡೆಗೆ ಓಡಿ ಆಕೆಯ ಕೈ ಹಿಡಿದರು. ಆಕೆಯ ಮಗ ತನ್ನ ಸೆಲ್ ಫೋನ್‌ನಲ್ಲಿ ಇಡೀ ಘಟನೆಯನ್ನು ರೆಕಾರ್ಡ್ ಮಾಡುವುದನ್ನು ವೀಡಿಯೊ ತೋರಿಸುತ್ತದೆ. ಯುವಕ ತನ್ನ ತಾಯಿಗೆ ಬೆಂಕಿ ಹಚ್ಚುವುದನ್ನು ಪೊಲೀಸ್ ಅಧಿಕಾರಿ ತಡೆದಿರುವುದನ್ನು ನೋಡಿದ ಯುವಕ, ಲೈಟರ್ ಬಳಸಿ ತಾಯಿಗೆ ಬೆಂಕಿ ಹಚ್ಚಿದ್ದಾನೆ.
उत्तर प्रदेश के अलीगढ़ के खैर थाना परिसर में एक महिला ने केरोसिन डालकर खुद को आग लगा ली….
थाने में महिला के जलते हुए की वीडियो वायरल हुई है. आरोप है कि पीड़ित महिला फरियाद लगा रही थी, लेकिन पुलिस कोई सुनवाई नहीं कर रही थी,महिला को अस्पताल भर्ती करवाया गया… pic.twitter.com/Dp3qoQbQ9a
— आदित्य तिवारी / Aditya Tiwari (@aditytiwarilive) July 16, 2024