Thursday, August 11, 2022

Latest Posts

ಸುಂಟಿಕೊಪ್ಪದಲ್ಲಿ ಕಾಡುಕೋಣಗಳು ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸ ದಿಗಂತ ವರದಿ, ಸುಂಟಿಕೊಪ್ಪ:

ಇಲ್ಲಿನ‌ ನಾರ್ಗಣೆ‌ ಗ್ರಾಮದಲ್ಲಿ ಗುರುವಾರ ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ‌ ಮೂಡಿಸಿವೆ.
ನಾರ್ಗಾಣೆ ಗ್ರಾಮದಲ್ಲಿರುವ ಯಂಕನ ಶ್ರೀರಾಮ ಎಂಬವರಿಗೆ ಸೇರಿದ ತೋಟದಲ್ಲಿ
ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ 8 ಕಾಟಿಗಳು ಕಾಣಿಸಿಕೊಂಡಿವೆ.
ಕಳೆದ ಒಂದು ವಾರದಿಂದ ಬೀಡು ಬಿಟ್ಟಿರುವ ಕಾಟಿಗಳ ಹಿಂಡಿನಿಂದಾಗಿ ತೋಟದಲ್ಲಿ ಓಡಾಡಲು ಭಯಪಡುವಂತಾಗಿದೆ. ಅಲ್ಲದೆ ತೋಟದ ಕೆಲಸಗಳಿಗೆ ಅಡಚಣೆಯಾಗುತ್ತಿದೆ ಎಂದು ಯಂಕನ ಕುಟುಂಬಸ್ಥರು ತಿಳಿಸಿದ್ದಾರೆ.
ಅರಣ್ಯ ಇಲಾಖೆಯವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಳ್ಳುವಂತೆ ಅವರುಗಳು ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss