ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋಕರ್ಣದ ರಾಮತೀರ್ಥ ಬೆಟ್ಟದ ನಡುವಿನ ಗುಹೆಯೊಂದರಲ್ಲಿ ಚಿಕ್ಕ ಚಿಕ್ಕ ಮಕ್ಕಳೊಂದಿಗೆ ವಾಸವಾಗಿದ್ದ ರಷ್ಯಾ ಮಹಿಳೆಯನ್ನು ವಾಪಸ್ ಅವರ ದೇಶಕ್ಕೆ ಕಳುಹಿಸಲು ಹೈಕೋರ್ಟ್ ಅನುಮತಿ ನೀಡಿದೆ.
ರಷ್ಯಾಗೆ ಮರಳುವ ಬಗ್ಗೆ ಮಹಿಳೆಯ ಇಚ್ಛೆ ಪರಿಗಣಿಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದ್ದು, ಮಹಿಳೆಗೆ ಅಗತ್ಯ ದಾಖಲಾತಿ ಒದಗಿಸಲು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಉತ್ತರ ಕನ್ನಡದ ಗೋಕರ್ಣ ಸಮುದ್ರ ತೀರದ ರಾಮತೀರ್ಥದ ಹತ್ತಿರದಲ್ಲಿರುವ ಗುಡ್ಡದ ಗುಹೆಯಲ್ಲಿ ರಷ್ಯಾ ಮೂಲದ ನಿನಾ ಕುಟಿನಾ ಮತ್ತು ಆಕೆಯ 6 ಮತ್ತು 4 ವರ್ಷದ ಇಬ್ಬರು ಮಕ್ಕಳೊಂದಿಗೆ ಇದ್ದಿದ್ದು ಕಂಡುಬಂದಿದ್ದು, ಅವರನ್ನು ಪೊಲೀಸರು ಸುರಕ್ಷಿತವಾಗಿ ಕರೆತಂದಿದ್ದರು.