ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ಮಾಡ್ತಿದ್ದಾರೆ. ಇದು ತುಂಬಾ ಸೂಕ್ಷ್ಮವಾದ ವಿಷಯ. ಹಾಗಾಗಿ ತನಿಖೆ ಮುನ್ನವೇ ಮಾತಾಡೋದು ತಪ್ಪಾಗುತ್ತದೆ ಎಂದಿದ್ದಾರೆ.
ಹಿರಿಯ ರಾಜಕಾರಣಿ ಬಗ್ಗೆ ಗಂಭೀರ ಆರೋಪ ಎದುರಾಗಿದೆ. ಇದರಲ್ಲಿ ರಾಜಕೀಯ ದುರುದ್ದೇಶ ಏನೂ ಇಲ್ಲ. ಮಹಿಳೆ ದೂರು ಕೊಟ್ಟಿದ್ದಾರೆ, ಇದರ ಬಗ್ಗೆ ಸಂಪೂರ್ಣವಾಗಿ ತನಿಖೆ ಆಗುತ್ತದೆ ಎಂದು ಹೇಳಿದ್ದಾರೆ.