ಹೊಸದಿಗಂತ ವರದಿ,ಮಂಡ್ಯ:
ತಾಲ್ಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ಮಂಗಳವಾರ ಸಂಜೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಯರಿಗೆ ಡಿಕ್ಕಿ ಹೊಡೆದು ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.
ನೆಲಮಾಕನಹಳ್ಳಿ ಗ್ರಾಮದ ಗೀತಾ ಮತ್ತು ರಶ್ಮಿ ಗಾಯಗೊಂಡ ಮಹಿಳೆಯರು. ಗಾರ್ಮೆಂಟ್ಸ್ ನಲ್ಲಿ ಕೆಲಸ ಹೋಗಿದ್ದ ತೆರಳಿದ್ದ ಮಹಿಳೆಯರು ಕೆಲಸ ಮುಗಿಸಿ ಬಸ್ ನಲ್ಲಿ ವಾಪಸ್ ಬಂದು ನೆಲಮಾಕನಹಳ್ಳಿ ಗೇಟ್ ನಲ್ಲಿ ಇಳಿದು ರಸ್ತೆ ದಾಟಲು ನಿಂತಿದ್ದರು. ಈ ವೇಳೆ ವೇಗವಾಗಿ ಮಳವಳ್ಳಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದು ರಸ್ತೆ ಬದಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಗಾಯಗೊಂಡಿದ್ದ ಮಹಿಳೆಯರಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.