ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪತ್ರಕರ್ತರ ಕಾರ್ಯ ಶ್ಲಾಘನೀಯ: ಪೂಜ್ಯ ಶ್ರೀ ಪ್ರಣವಾನಂದ ಸ್ವಾಮೀಜಿ

ಹೊಸದಿಗಂತ ವರದಿ, ಕಲಬುರಗಿ:

ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ,ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಪತ್ರಕರ್ತರ ಕಾರ್ಯ ನಿಜವಾಗಿಯೂ ಶ್ಲಾಘನೀಯವಾಗಿದ್ದು ಎಂದು ಅಫಜಲಪುರ ತಾಲೂಕಿನ ಪೂಜ್ಯ ಶ್ರೀ ಪ್ರಣವಾನಂದ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಶನಿವಾರ ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ವಿಶ್ವಕರ್ಮ ಹೋರಾಟ ಸಮಿತಿ ವತಿಯಿಂದ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ 36ನೇ ಪತ್ರಕರ್ತರ ಸಮ್ಮೇಳನದ ಯಶಸ್ಸಿಗಾಗಿ ಶ್ರಮಿಸಿದ ಪದಾಧಿಕಾರಿಗಳು, ಸದಸ್ಯರು, ಛಾಯಾಗ್ರಾಹಕ ಹಾಗೂ ಪತ್ರಕರ್ತರಿಗೆ ಅಭಿನಂದನೆಗಳು ಸಲ್ಲಿಸಿ, ಸನ್ಮಾನಿಸಿ ಆಶೀರ್ವಚನ ನೀಡಿದರು.

ರೈತ ಬರುಡಾದ ಭೂಮಿಯನ್ನು ಯಾವ ರೀತಿಯಲ್ಲಿ ಸ್ವಚ್ಛ ಮಾಡಿ, ಬೆಳೆಗಳನ್ನು ಬೆಳೆಯುತ್ತಾನೆಯೋ, ಅದೇ ರೀತಿ ಪತ್ರಕರ್ತರು ಸಹ ಸಮಾಜದ ಕೊಂಡಿಯಾಗಿ, ಸಮಾಜವನ್ನು ಸ್ವಚ್ಛ ಮಾಡುವ ಕೆಲಸ ಮಾಡುತ್ತಾರೆ ಎಂದರು.

36ನೇ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಇಡೀ ರಾಜ್ಯದ ಮೂಲೆ ಮೂಲೆಗಳಿಂದ ಪತ್ರಕರ್ತರು ಆಗಮಿಸಿದ್ದರು. ಅವರ ಸತ್ಕಾರ, ಉಪಚಾರ ಸರಿಯಾಗಿ ಮಾಡಿ, ಜಾತ್ರೆಯ ರೀತಿಯಲ್ಲಿ ಸಮ್ಮೇಳನವನ್ನು ಯಶಸ್ವಿಯಾಗಿ ಮಾಡಿದ ಕೀರ್ತಿ, ನಿಮ್ಮೆಲ್ಲರಿಗೂ ಸಲ್ಲುತ್ತದೆ ಎಂದರು.

ನಮಗೆ ಬರುವ ಸನ್ಮಾನಗಳು, ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಇಮ್ಮುಡಿಗೊಳಿಸಿ, ಹೆಚ್ಚೆಚ್ಚು ಕೆಲಸ ಮಾಡಲು ಪ್ರೇರಣೆ ನೀಡುತ್ತವೆ. ಮುಂದಿನ ದಿನಮಾನಗಳಲ್ಲಿ ತಾವು ಬೆಳೆಯುವದರ ಮೂಲಕ, ಸಮಾಜವನ್ನು ಬೆಳೆಸುವ, ತಿದ್ದುವ ಕೆಲಸ ಪತ್ರಕರ್ತರ ಹೆಗಲಿಗೆ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿ ಸಿಂಗ್, ಠಾಕೂರ್, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪಾ ಅವಂಟಿ,ಕಾಯ೯ಕಾರಿಣಿ ಸದಸ್ಯ ಹಣಮಂತರಾವ ಬೈರಾಮಡಗಿ, ವಿಶ್ವಕರ್ಮ ಹೋರಾಟ ಸಮಿತಿ ಮುಖ್ಯಸ್ಥ ದೇವಿಂದ್ರ ಕಲ್ಲೂರ, ಮನೋಹರ ಪೋದ್ದಾರ ಇದ್ದರು. ಪತ್ರಕರ್ತ ಸುರೇಶ ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!