February 4, 2026
Wednesday, February 4, 2026
spot_img

ಪರಶುರಾಮನಿಗೇ ಕನ್ನ ಹಾಕಿದ ಖದೀಮರು: ಥೀಮ್ ಪಾರ್ಕ್‌ನ ಮೇಲ್ಛಾವಣಿಯ ತಾಮ್ರದ ಹೊದಿಕೆ ಎಸ್ಕೇಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ಗೆ ನುಗ್ಗಿದ ಕಳ್ಳರು ಥೀಮ್ ಪಾರ್ಕ್‌ನ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ್ದ ಅಪಾರ ಪ್ರಮಾಣದ ತಾಮ್ರದ ಹೊದಿಕೆಯನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ.4 ರಂದು ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಈ ಬಗ್ಗೆ ಕಾರ್ಕಳ ನಗರ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ತನಿಖೆ ಮುಂದುವರಿದಿದ್ದು, ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದೆಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನ ಮುಖ್ಯ ದ್ವಾರವನ್ನು ಯಾರೋ ಕಳ್ಳರು ಯಾವುದೋ ಆಯುಧದಿಂದ, ಥೀಮ್ ಪಾರ್ಕ್‌ನ ದ್ವಾರವನ್ನು ಮೀಟಿ ಬಾಗಿಲನ್ನು ಒಡೆದು ಒಳಪ್ರವೇಶಿಸಿದ್ದಾರೆ. ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ ತಾಮ್ರದ ಹೊದಿಕೆಯನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.
ಸ್ಥಳಕ್ಕೆ ಕಾರ್ಕಳ ನಗರಕ್ಕೆ ಠಾಣಾ ಉಪನಿರೀಕ್ಷಕ ಶಿವಕುಮಾರ್ ಎಸ್.ಆರ್. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೆರಳಚ್ಚು ತಜ್ಞರ ತಂಡ, ಶ್ವಾನದಳ ಹಾಗೂ ಸೋಕೋ ತಂಡದಿಂದ ಘಟನಾ ಸ್ಥಳದಿಂದ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಪತ್ತೆ ಕಾರ್ಯ ಕಾರ್ಯವನ್ನು ಮುಂದುವರಿಸಲಾಗುವುದೆಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !