SPORTS| ಇಂದಿನಿಂದ ವಿಶ್ವಕಪ್ ಅಭ್ಯಾಸ ಪಂದ್ಯ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅ.5 ರಂದು ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಚಾಲನೆ ಸಿಗಲಿದ್ದು, ಇಂದಿನಿಂದ ಅಭ್ಯಾಸ ಪಂದ್ಯಗಳು ಆರಂಭವಾಗಲಿದೆ.

ಮೊದಲ ದಿನ ಮೂರು ಪಂದ್ಯಗಳು ನಡೆಯಲಿವೆ. ಬಾಂಗ್ಲಾದೇಶ-ಶ್ರೀಲಂಕಾ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ದ್ವಿತೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ-ಅಫ್ಘಾನಿಸ್ತಾನ್ ಸೆಣೆಸಾಡಲಿವೆ. ಇನ್ನು ಮೂರನೇ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಪಂದ್ಯ ವೀಕ್ಷಿಸಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!