ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಜರುಗಲಿದೆ. ಈ ವೈರಮುಡಿ ಉತ್ಸವದಲ್ಲಿ ಶ್ರೀದೇವಿ, ಭೂದೇವಿಯರೊಂದಿಗೆ ಚೆಲುವನಾರಾಯಣಸ್ವಾಮಿ ಭಕ್ತರಿಗೆ ದರ್ಶನ ನೀಡಿಲಿದ್ದಾರೆ.
ಮಂಡ್ಯ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ವೈರಮುಡಿ ಉತ್ಸವಕ್ಕೆ ಬೆಳಗ್ಗೆ 8:30ಕ್ಕೆ ಚಾಲನೆ ಸಿಗಲಿದೆ. ಶ್ರೀದೇವಿ, ಭೂದೇವಿಯರ ಜೊತೆಗೆ ರತ್ನ ಖಚಿತ ವೈರಮುಡಿ ಕಿರೀಟ ಧರಿಸಿ ಭಕ್ತರಿಗೆ ದರ್ಶನ ನೀಡಲಿರುವ ಗರುಢಾರೂಢನಾದ ಚೆಲುವನಾರಾಯಣಸ್ವಾಮಿಯನ್ನು ನೋಡಿದರೆ ಸಾಕ್ಷಾತ್ ಭಗವಂತನೇ ಧರೆಗಿಳಿದು ವೈರಮುಡಿ ಕಿರೀಟ ಧರಿಸಿ ಭಕ್ತರಿಗೆ ದರ್ಶನ ನೀಡಿದಂತೆ ಭಾಸವಾಗುತ್ತದೆ.
ಇಂದು ಚೆಲುವನಾರಾಯಣಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಹೊರರಾಜ್ಯದಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಇಂದಿನ ವೈರಮುಡಿ ಉತ್ಸವಕ್ಕೆ ಲಕ್ಷಾಂತರ ಜನರು ಸಾಕ್ಷಿಯಾಗಲಿದ್ದಾರೆ. ಈಗಾಗಲೇ ಜಿಲ್ಲಾ ಖಜಾನೆಯಿಂದ ಆಭರಣಗಳು ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಗಿದೆ.