ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಕ್ಕೆ ಜಲ ಹಾಗೂ ವಾಯು ಗಂಡಾಂತರವಿದೆ. ಮತ್ತೆ ಯುದ್ಧ ಭೀತಿ ಇದ್ದು ಕೆಲವು ದೇಶಗಳು ನಾಶವಾಗಲಿವೆ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಕೊವಿಡ್ ಕುರಿತು ಕೂಡ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರೋದು ಒಳ್ಳೆಯದು. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ ಎಂದು ಹೇಳಿದ್ದಾರೆ.
ಹಿಮಾಲಯ ಕರಗಿ ದೆಹಲಿ ವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ ಸಂಕ್ರಾಂತಿಯ ನಂತರ ಎನಾಗುತ್ತದೆಯೋ ನೋಡಬೇಕು ಎಂದು ಭವಿಷ್ಯ ನುಡಿದಿದ್ದಾರೆ.