ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ 1 ವರ್ಷದಿಂದ ವಿಶ್ವದ ನಂ.1 ಶ್ರೀಮಂತ ಸ್ಥಾನದಲ್ಲಿದ್ದ ಎಲಾನ್ ಮಸ್ಕ್ ಈಗ ನಂ.2ಕ್ಕೆ ಕುಸಿದಿದ್ದಾರೆ.
ಹೌದು, ಕಳೆದೊಂದು 1 ವರ್ಷದಿಂದ ಎಲಾನ್ ಮಸ್ಕ್ ವಿಶ್ವದ ನಂ.1 ಶ್ರೀಮಂತ ಸ್ಥಾನದಲ್ಲಿದ್ದರು. ಆದರೆ ಇದೀಗ ನಂ.2ಕ್ಕೆ ಇಳಿದಿದ್ದಾರೆ. ಒರಾಕಲ್ ಕಂಪನಿ ಸಹಸಂಸ್ಥಾಪಕ ಲ್ಯಾರಿ ಎಲ್ಲಿಸ್ಸನ್ ವಿಶ್ವದ ನಂ.1 ಶ್ರೀಮಂತ ಪಟ್ಟವನ್ನು ಬಾಚಿಕೊಂಡಿದ್ದಾರೆ.
ಲ್ಯಾರಿ ಅವರ ಆಸ್ತಿಯು ಸೋಮವಾರ (ಸೆ.8) ಬರೋಬ್ಬರಿ 101 ಬಿಲಿಯನ್ ಡಾಲರ್ ವೃದ್ಧಿಯಾಗಿ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇದರಿಂದಾಗಿ ಇವರ ಒಟ್ಟು ಆಸ್ತಿಯು 393 ಬಿಲಿಯನ್ ಡಾಲರ್‌ಗೆ (34 ಲಕ್ಷ ಕೋಟಿ ರೂ.) ಏರಿಕೆಯಾಗಿದೆ. ಎಲಾನ್ ಮಸ್ತ್ 385 ಬಿಲಿಯನ್ ಡಾಲರ್ ಆಸ್ತಿ ಹೊಂದುವ ಮೂಲಕ (33 ಲಕ್ಷ ಕೋಟಿ ರೂ.) 2ನೇ ಸ್ಥಾನಕ್ಕೆ ಕುಸಿದಿದ್ದಾರೆ.