ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಶಿವರಾಜ್‌ಕುಮಾರ್ ಅಭಿಮಾನಿಗಳ ಕೋರಿಕೆ ಈಡೇರಿದೆ. ಅವರ ಆಪರೇಷನ್ ಯಶಸ್ವಿಯಾಗಿದೆ. ಮಂಗಳವಾರ (ಡಿಸೆಂಬರ್ 24) ಸಂಜೆ 6 ಗಂಟೆಗೆ ಆಪರೇಷನ್ ಪ್ರಾರಂಭವಾಯಿತು. ಈ ಆಪರೇಷನ್ ಸತತ ನಾಲ್ಕರಿಂದ ಐದು ಗಂಟೆಗಳ ಕಾಲ ನಡೆಯಿತು ಮತ್ತು ಯಶಸ್ವಿಯಾಗಿದೆ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ.
ಶಿವರಾಜ್‌ಕುಮಾರ್ ಮೊದಲಿನಿಂದಲೂ ಪಾಸಿಟಿವ್ ಆಗಿ ಯೋಚಿಸುತ್ತಾ ಬಂದವರು. ಅದೇ ರೀತಿ ಸರ್ಜರಿ ನಡೆಯುತ್ತದೆ ಎಂದಾಗ ಅದನ್ನೂ ಪಾಸಿಟಿವ್ ಆಗಿ ತೆಗೆದುಕೊಂಡರಯ. ಅಮೆರಿಕದಲ್ಲಿ ಇದೀಗ ಅವರ ಶಸ್ತಚಿಕಿತ್ಸೆ ಯಶಸ್ವಿಯಾಗಿದೆ. ಈ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.
ಆಸ್ಪತ್ರೆಯಲ್ಲಿ ಶಿವಣ್ಣನೊಂದಿಗೆ ಪತ್ನಿ ಗೀತಾ, ಪುತ್ರಿ ನಿವೇದಿತಾ, ಬಾಮೈದ ಮಧು ಬಂಗಾರಪ್ಪ ಜೊತೆಗಿದ್ದಾರೆ.