ಹೈಕೋರ್ಟ್ ನಲ್ಲಿ ನಾಡಗೀತೆಗೆ ಸಂಗೀತ ಸಂಯೋಜನೆ ಪ್ರಶ್ನಿಸಿದ್ದ ರಿಟ್ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ರಾಷ್ಟ್ರ ಕವಿ ಕುವೆಂಪು(Kuvempu) ವಿರಚಿತ ನಾಡಗೀತೆಗೆ (Karnataka anthem) ಸಂಗೀತ ಸಂಯೋಜನೆ ಪ್ರಶ್ನಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court)​ ವಜಾಗೊಳಿಸಿದೆ.

ರಾಜ್ಯದಲ್ಲಿ ನಾಡಗೀತೆಯನ್ನು ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ಕಾಲ ಹಾಡುಬೇಕು ಎಂದು ರಾಜ್ಯ ಸರ್ಕಾರದಿಂದ ಕಡ್ಡಾಯಗೊಳಿಸಲಾಗಿತ್ತು. ಆದರೆ, ಇದನ್ನು ಪ್ರಶ್ನೆ ಮಾಡಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ಜೈ ಭಾರತ ಜನನಿಯ ತನುಜಾತೆ, ಜಉ ಏ ಕರ್ನಾಟಕ ಮಾತೆ… ನಾಡಗೀತೆಯ ಮ್ಯೂಸಿಕ್ ಟ್ಯೂನ್ ವಿವಾದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ರಾಜ್ಯ ಸರ್ಕಾರದಿಂದ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ಕಾಲ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಹೈಕೋರ್ಟ್‌ ಮೊರೆ ಹೋಗಿದ್ದರು.

ಕೃಷ್ಣಮೂರ್ತಿ ಅವರು ಸಲ್ಲಿಕೆ ಮಾಡಿದ್ದ ತಕರಾರು ಅರ್ಜಿಯನ್ನು ವಿಚಾರಣೆ ಮಾಡಿದ ಹೈಕೋರ್ಟ್‌, ನಿರ್ದಿಷ್ಟ ರಾಗದಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಸರ್ಕಾರಕ್ಕೆ ಅಧಿಕಾರವಿದೆ. ಸರ್ಕಾರಕ್ಕೆ ಶಿಕ್ಷಣ ಕಾಯ್ದೆಯಡಿ ಅಧಿಕಾರವಿದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!