WEATHER | ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ವರ್ಷಾರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಸಿಲಿನಿಂದ ಬೇಸತ್ತಿರುವ ಕರ್ನಾಟಕ ಜನತೆಗೆ ಸಿಹಿ ಸುದ್ದಿ ಇದಾಗಿದ್ದು, ಇಂದಿನಿಂದ ಏ.17ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯುಗಾದಿಯಂದು ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 15ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ.

ಇನ್ನುಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!