ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ವರದಿ, ವಿಜಯಪುರ:
ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಬಾಗವಾನ ನಗರದಲ್ಲಿ ನಡೆದಿದೆ.
ಮೃತಪಟ್ಟವನನ್ನು ಮೂಲತಃ ಬಸವನಬಾಗೇವಾಡಿಯ ನಿವಾಸಿ ಚನ್ನಬಸು ಆಳಗಿ (28) ಎಂದು ಗುರುತಿಸಲಾಗಿದೆ.
ಚನ್ನಬಸು ಆಳಗಿ ಈತನು ಇಂಡಿಯ ಧರ್ಮಸ್ಥಳ ಸಂಘದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ತನ್ನ ರೂಮ್ನಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇಂಡಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.