Wednesday, August 10, 2022

Latest Posts

ತನಗೆ ಮದುವೆಯಾಗಲು ಹುಡುಗಿ ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ಬಂದ ಯುವಕ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವ್ಯಕ್ತಿಯೊರ್ವನು ತನಗೆ ಮದುವೆಯಾಗಲು ಯುವತಿಯನ್ನು ಹುಡುಕಿಕೊಡಿ ಎಂದು ಪೊಲೀಸರ ಸಹಾಯ ಕೇಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಹೌದು, ಶಾಮ್ಲಿ ಜಿಲ್ಲೆಯ 26 ವರ್ಷದ ಅಜೀಂ ಮನ್ಸೂರಿ ಎತ್ತರದ ಸಮಸ್ಯೆಯಿಂದ ಬಳಲುತ್ತಿದ್ದು, ಕೇವಲ 3 ಅಡಿ 2 ಇಂಚು ಎತ್ತರವಿರುವ ಕಾರಣದಿಂದ ಈವರೆಗೂ ಮದುವೆಯಾಗಲು ಯಾವ ಯುವತಿಯೂ ಮುಂದೆ ಬರಲಿಲ್ಲ. ಇದರಿಂದಾಗಿ ನೊಂದ ಯುವಕ ಸಹಾಯಕ್ಕಾಗಿ ಮಹಿಳಾ ಪೊಲೀಸ್ ಠಾಣೆಯ ಮೊರೆ ಹೋಗಿದ್ದಾನೆ.
6 ಮಂದಿ ಸಹೋದರರದಲ್ಲಿ ಒಬ್ಬನಾದ ಅಝೀಂ ಮೊದಲಿನಿಂದಲೂ ಗಿಡ್ಡವಾಗಿದ್ದು, ಮದುವೆಗೆ ಯಾರೂ ಮುಂದಾಗದ ಕಾರಣ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸೇರಿ, ಉನ್ನತಾಧಿಕಾರಿಗಳಿಗೂ ಪತ್ರ ಬರೆದಿದ್ದು, ಸಹಾಯ ಕೇಳಿದ್ದಾನೆ.ಇದೀಗ ಇವನ ಕತೆ ಕೇಳಿದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು, ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಕೈರಾನಾದಲ್ಲಿ ಅಝೀಂ ಮನ್ಸೂರ್ ಅಂಗಡಿಯನ್ನು ಇಟ್ಟುಕೊಂಡಿದ್ದು, ಮುಂದಿನ ರಂಜಾನ್ ಒಳಗೆ ಮದುವೆಯಾಗಬೇಕೆಂಬ ಅಭಿಲಾಷೆ ಹೊಂದಿದ್ದಾನೆ. ಮದುವೆಯಾದರೆ ಪತ್ನಿಯನ್ನು ಹನಿಮೂನ್​ಗೆ ಗೋವಾ, ಕುಲ್ಲು-ಮನಾಲಿ, ಶಿಮ್ಲಾಗೆ ಕರೆದುಕೊಂಡು ಹೋಗುವುದಾಗಿ ತಿಳಿಸಿದ್ದಾನೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss