ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ರೀಲ್​ ಮಾಡಿದ ಯುವತಿ: ಪೊಲೀಸರು ಹಾಕಿದ್ರು17 ಸಾವಿರ ರೂಪಾಯಿ ದಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಹೆದ್ದಾರಿಯ ಮಧ್ಯದಲ್ಲಿ ನಿಲ್ಲಿಸಿ ವಿಡಿಯೋ ಚಿತ್ರೀಕರಿಸಿದ ಯುವತಿಗೆ ಸಂಕಷ್ಟ ಎದುರಾಗಿದೆ.

ಯುವತಿ ಹೆದ್ದಾರಿ ಮಧ್ಯೆ ಕಾರು ನಿಲ್ಲಿಸಿ ರೀಲ್ಸ್ ಮಾಡಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದು, ಆಕೆಗೆ ಪೊಲೀಸರು 17 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ವೈಶಾಲಿ ಚೌಧರಿ ಖುಟಲಿ (Vaishali Chaudhary Khutail) ಎಂಬಾಕೆಯೇ ನಡುರಸ್ತೆಯಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡಲು ಹೋಗಿ ದಂಡ ಕಟ್ಟುವಂತಾದ ಸೋಶಿಯಲ್ ಮೀಡಿಯಾ ಸ್ಟಾರ್, ಉತ್ತರಪ್ರದೇಶದ (Uttar Pradesh) ಗಾಜಿಯಾಬಾದ್ (Ghaziabad) ನಿವಾಸಿ.

ಈಕೆ ಹೆದ್ದಾರಿಯಲ್ಲಿ ರೀಲ್ಸ್ ಮಾಡುವ ಸಲುವಾಗಿ ತನ್ನ ಕಾರನ್ನು ನಡುರಸ್ತೆಯಲ್ಲಿ ನಿಲ್ಲಿಸಿ ವಿಡಿಯೋ ಮಾಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಂತೆ ಸಾಕಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗಾಜಿಯಾಬಾದ್ ಪೊಲೀಸರು ಕೂಡ ಗಮನಿಸಿದ್ದು, ಯುವತಿಗೆ ಸಂಚಾರಿ ಹಾಗೂ ರಸ್ತೆ ಸುರಕ್ಷತಾ ನಿಯಮ ಉಲ್ಲಂಘಿಸಿದ್ದಕ್ಕಾಗಿ 17 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!