ಶ್ರೀಮಂತ ಕನ್ನಡ ಪರಂಪರೆಗೆ ಯುವ ಪೀಳಿಗೆಯೇ ನೈಜ ವಾರಸುದಾರರು: ಸಚಿವ ಪಿ.ಎಂ.ನರೇಂದ್ರಸ್ವಾಮಿ

ಹೊಸದಿಗಂತ ವರದಿ ಮಡಿಕೇರಿ: ಯುವ ಜನರು ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಯ ಬಗೆಗೆ ಅಭಿರುಚಿ ಬೆಳೆಸಿಕೊಳ್ಳುವ ಮೂಲಕ ನಮ್ಮ ಶ್ರೀಮಂತ ಪರಂಪರೆಯ ನೈಜ ವಾರಸುದಾರರಾಗಿ ಕನ್ನಡತನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಕರೆ ನೀಡಿದರು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ‌ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಕನ್ನಡ ಬರೀ ಭಾಷೆಯಲ್ಲ. ಅದು‌ ನಮ್ಮ ಉಸಿರು. ಸೌಹಾರ್ದತೆ ಸಾರುವ ಕನ್ನಡ ನಾಡು, ಸ್ವಾಭಿಮಾನದ ಜೊತೆಗೆ … Continue reading ಶ್ರೀಮಂತ ಕನ್ನಡ ಪರಂಪರೆಗೆ ಯುವ ಪೀಳಿಗೆಯೇ ನೈಜ ವಾರಸುದಾರರು: ಸಚಿವ ಪಿ.ಎಂ.ನರೇಂದ್ರಸ್ವಾಮಿ