ಹೆಚ್ಚು ಮೊಬೈಲ್​ ಬಳಕೆ ಮಾಡಬೇಡ ಎಂದು ಬೈದಿದ್ದಕ್ಕೆ ಅಣ್ಣನನ್ನೇ ಕೊಂದ ತಂಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದಲ್ಲಿ ಸಹೋದರಿಯೊಬ್ಬಳು ತನ್ನ ಸಹೋದರ ಸೆಲ್ ಫೋನ್ ಬಳಸಬೇಡಿ ಎಂದು ಹೇಳಿದ ಕಾರಣಕ್ಕೆ ಅಣ್ಣನನ್ನು ಕೊಂದಿರುವ ಘಟನೆ ನಡೆದಿದೆ. 14 ವರ್ಷದ ಬಾಲಕಿ ತನ್ನ ಸೆಲ್ ಫೋನ್‌ಗೆ ವ್ಯಸನಿಯಾಗಿದ್ದಳು ಮತ್ತು ಹುಡುಗರೊಂದಿಗೆ ದೀರ್ಘಕಾಲ ಮಾತನಾಡುತ್ತಿದ್ದಳು. ಇದರಿಂದ ಕೋಪಗೊಂಡ ಬಾಲಕಿ ಸಹೋದರ ಹೆಚ್ಚು ಫೋನ್ ನೋಡಬೇಡ ಎಂದು ಬೈದಿದ್ದಕ್ಕೆ ಅಣ್ಣನನ್ನು ಹತ್ಯೆ ಮಾಡಿದ್ದಾಳೆ.

ಅಪರಾಧಕ್ಕೆ ಸಂಬಂಧಿಸಿದಂತೆ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ಕಲಾ ಗ್ರಾಮದಲ್ಲಿ ಶುಕ್ರವಾರ ಬಾಲಕಿಯನ್ನು ಬಂಧಿಸಲಾಗಿದೆ. ಘಟನೆಯ ಸಮಯದಲ್ಲಿ ಇತರ ಕುಟುಂಬ ಸದಸ್ಯರು ವ್ಯಾಪಾರದ ನಿಮಿತ್ತ ಹೊರಹೋಗಿದ್ದರು ಬಾಲಕಿ ಮತ್ತು ಆಕೆಯ ಸಹೋದರ (18) ಮನೆಯಲ್ಲಿದ್ದರು ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಸೆಲ್ ಫೋನ್ ನಲ್ಲಿ ಹುಡುಗರ ಜೊತೆ ಮಾತನಾಡಿದ್ದಕ್ಕೆ ನನ್ನನ್ನು ಗದರಿಸಿ ಫೋನ್ ಬಳಸುವುದನ್ನು ನಿಲ್ಲಿಸುವಂತೆ ಹೇಳಿದ್ದ. ಬಳಿಕ ಅಣ್ಣ ಮಲಗಿದ್ದಾಗ ಕೊಡಲಿಯಿಂದ ಕುತ್ತಿಗೆಗೆ ಹೊಡೆದಿದ್ದು, ಆತ ತಕ್ಷಣ ಸಾವನ್ನಪ್ಪಿದ್ದಾನೆ. ಬಳಿಕ ಬಾಲಕಿ ಸ್ನಾನ ಮಾಡಿ ತನ್ನ ಬಟ್ಟೆಯಲ್ಲಿದ್ದ ರಕ್ತದ ಕಲೆಗಳನ್ನು ತೊಳೆದು ತನ್ನ ಸಹೋದರನನ್ನು ಕೊಂದಿರುವುದಾಗಿ ನೆರೆಹೊರೆಯವರಿಗೆ ತಿಳಿಸಿದ್ದಾಳೆ.

ಪೊಲೀಸರ ವಿಚಾರಣೆ ವೇಳೆ ಆಕೆ ಆತನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!