ಶಿವಮೊಗ್ಗ ಡಿಸಿ ಕಚೇರಿ ಎದುರು ಬೈಕ್ ಗೆ ಬೆಂಕಿ ಹಚ್ಚಿದ ಯುವಕ!

ಹೊಸದಿಗಂತ ವರದಿ, ಶಿವಮೊಗ್ಗ:

ಜಿಲ್ಲಾಧಿಕಾರಿಗಳ ಕಚೇರಿ ಎದುರು ತನ್ನದೇ ಸ್ವಂತ ಬೈಕ್‌ಗೆ ಬೆಂಕಿ ಹಚ್ಚಿ ಯುವಕನೋರ್ವ ಆಕ್ರೋಶದ ಪ್ರತಿಭಟನೆ ನಡೆಸಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಸಮೀಪದ ಗಾಡಿಕೊಪ್ಪ ಬಳಿಯ ಅಂಬೇಡ್ಕರ್ ಕಾಲೋನಿ ನಿವಾಸಿ ರಾಜು ಎಂತಾತನೇ ಈ ರೀತಿ ಪ್ರತಿಭಟನೆ ನಡೆಸಿರುವ ವ್ಯಕ್ತಿ.
ಮಧ್ಯಾಹ್ನ 2.30ರ ಸುಮಾರಿಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಂದ ರಾಜು, ತನ್ನ ್ಯಾಷನ್ ಪ್ರೋ ಬೈಕ್‌ಗೆ ಬೆಂಕಿ ಹೆಚ್ಚಿದ್ದಾನೆ. ತಮ್ಮ ಬೇಡಿಕೆ ಈಡೇರಿಸದೇ ಇರುವುದಕ್ಕೆ ಹೀಗೆ ಬೆಂಕಿ ಹಚ್ಚಿದ್ದೇನೆ. ಯಾರಾದರೂ ತಡೆದರೆ ಬೆಂಕಿಗೆ ತಾನೂ ಹಾರುವುದಾಗಿ ಬೆದರಿಕೆ ಹಾಕಿದ್ದಾನೆ.
ಯುವಕನ ಬೇಡಿಕೆ.
ಇತ್ತೀಚೆಗೆ ತುಂಗಾ ಮೇಲ್ದಂಡೆ ಯೋಜನೆ ಅಕಾರಿಗಳು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಾಲೆಯ ಜಾಗದಲ್ಲಿ ಹಕ್ಕಿಪಿಕ್ಕಿ ಸಮುದಾಯ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಶೆಡ್‌ಗಳನ್ನು ತೆರವು ಮಾಡಿದ್ದರು. ಇದನ್ನು ವಿರೋಸಿ ಹಕ್ಕಿಪಿಕ್ಕಿ ಸಮುದಾಯ ಡಿಸಿ ಕಚೇರಿ ಆವರಣದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ತಮಗೆ ಅಕ್ರಮ-ಸಕ್ರಮ ಯೋಜನೆಯಲ್ಲಿ ಜಾಗ ಮಂಜೂರು ಮಾಡುವಂತೆ ಆಗ್ರಹಿಸಿದ್ದರು. ಈ ವೇಳೆ ಅಕಾರಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಭರವಸೆ ನೀಡಿದ್ದರು. ಭರವಸೆ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ತನ್ನದೇ ಬೈಕ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾನೆ.
ಬೈಕ್‌ಗೆ ಬೆಂಕಿ ಹಚ್ಚಿದ್ದರಿಂದ ಡಿಸಿ ಕಚೇರಿ, ಎಸಿ ಕಚೇರಿ, ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರು ಆತಂಕಕ್ಕೆ ಈಡಾದರು. ಕೂಡಲೇ ಸಿಬ್ಬಂದಿಯೋರ್ವರು ಬೆಂಕಿ ನಂದಿಸಿದರು. ಬಳಿಕ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ಜಯನಗರ ಪೊಲೀಸರು ರಾಜುವನ್ನು ವಶಕ್ಕೆ ಪಡೆದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!