ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತುಮಕೂರಿನಲ್ಲಿ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವಿಕ್ರಮ್ ಎಂದು ಗುರುತಿಸಲಾಗಿದೆ. ಆರೋಪಿಯ, ಸಲ್ಮಾನ್ ಖಾನ್ 5 ಕೋಟಿ ರೂ. ಹಣ ನೀಡಬೇಕು ಮತ್ತು ದೇವಾಲಯಕ್ಕೆ ಬಂದು ಕ್ಷಮೆ ಕೋರಬೇಕು ಎಂದು ಮುಂಬೈ ಪೊಲೀಸರಿಗೆ ಮೆಸೇಜ್ ಕಳುಹಿಸಿದ್ದ.
ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.