ನಟಿ ವಿನಯಾ ಪ್ರಸಾದ್‌ ಮನೆ ಬೀಗ ಮುರಿದು ನಗದು ಹಣ ಕಳವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಹಿರಿಯ ನಟಿ ವಿನಯಪ್ರಸಾದ್ ಅವರ ಬೆಂಗಳೂರಿನ ನಂದಿನಿ ಲೇಔಟ್ ನಿವಾಸದಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಅ.22ರಂದು ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಾಕರ್‌ನಲ್ಲಿದ್ದ ಹಣವನ್ನು ದೋಚಿದ್ದಾರೆ. ದೀಪಾವಳಿಗೆಂದು ಉಡುಪಿಗೆ ತೆರಳಿದ್ದ ನಟಿ ನ.26ರಂದು ಮನೆಗೆ ಮರಳಿದ್ದರು. ಈ ವೇಳೆ ಮನೆಯಲ್ಲಿ ಕಳ್ಳತನ ನಡೆದಿರುವುದನ್ನು ಗಮನಿಸಿ ಠಾಣೆಗೆ ದೂರು ನೀಡಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
26ರಂದು ಸಂಜೆ 4.30ಕ್ಕೆ ನಟಿ ಮನೆಗೆ ಮರಳಿದ್ದರು. ಬಳಿಕ ಮನೆಯ ಬೀಗ ಮುರಿದು ಕಳ್ಳರು ಒಳ ನುಗ್ಗಿರುವುದು ಬೆಳಕಿಗೆ ಬಂದಿದೆ. ಮನೆಯ ಕೊಠಡಿಯ ಲಾಕರ್ ನಲ್ಲಿಟ್ಟಿದ್ದ ನಗದನ್ನು ಕಳ್ಳರು ಕದ್ದೊಯ್ದಿದ್ದಾರೆ. ಪೊಲೀಸರು ಹಳೆಯ ಗ್ಯಾಂಗ್ ಕಳ್ಳರು, ಸುಲಿಗೆಕೋರರು ಮತ್ತು ಈ ಪ್ರದೇಶದಲ್ಲಿ ಅಪರಾಧ ಹಿನ್ನೆಲೆ ಹೊಂದಿರುವ ಜನರನ್ನು ವಿಚಾರಣೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!