August 30, 2026
Sunday, August 30, 2026
spot_img

ಶೌಚಾಲಯವೇ ಇವರ ಸೇಫ್ ಲಾಕರ್! 5 ಕೋಟಿ ಮೌಲ್ಯದ ಚಿನ್ನದೊಂದಿಗೆ ಸಿಕ್ಕಿಬಿದ್ದ ಸ್ಮಗ್ಲರ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ದೊಡ್ಡ ಮಟ್ಟದ ಚಿನ್ನದ ಬೇಟೆಯಾಡಿದ್ದಾರೆ.

ಬಾಂಗ್ಲಾದೇಶದ ಮಾರ್ಗವಾಗಿ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ 2 ಚಿನ್ನದ ಬಿಸ್ಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ಅತ್ಯಂತ ಚಾಣಾಕ್ಷತನದಿಂದ ಚಿನ್ನವನ್ನು ಕ್ಯಾಪ್ಸುಲ್ ರೂಪಕ್ಕೆ ಪರಿವರ್ತಿಸಿ, ದೇಹದ ಖಾಸಗಿ ಭಾಗಗಳಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ವಿಮಾನ ನಿಲ್ದಾಣದ ಶೌಚಾಲಯದ ಬಳಿ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಈ ಸ್ಮಗ್ಲಿಂಗ್ ಜಾಲ ಬಯಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !