ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೋಡಾ ಅವರನ್ನು ಮರುನೇಮಕಗೊಳಿಸಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಭವಿಷ್ಯ ನಿಜವಾಗಿದೆ.
ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಸಂದರ್ಶನದ ವಿಡಿಯೋವನ್ನು ಬಿಜೆಪಿ ಶೇರ್ ಮಾಡಿದೆ. ಸ್ಯಾಮ್ ಪಿತ್ರೋಡಾ ರಾಜೀನಾಮೆ ನೀಡಿದರು ಆದರೆ ಕೆಲವೇ ದಿನಗಳಲ್ಲಿ ಅದೇ ಹುದ್ದೆಗೆ ಮರಳುವುದಾಗಿ ಮೋದಿ ಭವಿಷ್ಯ ನುಡಿದಿದ್ದರು.
ಲೋಕಸಭೆ ಚುನಾವಣೆ ವೇಳೆ ಪಿತ್ರೋಡಾ ಅವರು ನೀಡಿದ ಎರಡು ಹೇಳಿಕೆಗಳು ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ಸ್ಯಾಮ್ ಪಿತ್ರೋಡಾ ಪ್ರಕಾರ, ಅಮೆರಿಕದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ಇದೆ ಯಾರಾದರೂ ಹೆಚ್ಚು ಮೌಲ್ಯದ ಆಸ್ತಿ ಹೊಂದಿದ್ದು ಅವರು ಮೃತಪಟ್ಟಾಗ 45 ಪ್ರತಿಶತನ ಮಾತ್ರ ಅವರ ಮಕ್ಕಳಿಗೆ ಹೋಗುತ್ತದೆ, ಉಳಿದ ಶೇ.55ರಷ್ಟು ಆಸ್ತಿ ಸರ್ಕಾರಕ್ಕೆ ಹೋಗುತ್ತದೆ. ನೀವು ನಿಮ್ಮ ಸಂಪತ್ತನ್ನು ಸಾರ್ವಜನಿಕರಿಗೆ ಬಿಡುವುದು ಸೂಕ್ತ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆಗೆ ಕೂಡ ಕಾರಣವಾಗಿತ್ತು.