ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದಲ್ಲಿ 136 ಜನ ಕಳ್ಳರು ಇದ್ದಾರೆ. ಅವರ ಬಳಿ ಅಭಿವೃದ್ಧಿಗೆ ಹಣ ಇಲ್ಲ. ಅದಕ್ಕಾಗಿ ಬೆಲೆ ಏರಿಕೆ ಮೂಲಕ ಲೂಟಿ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಆಹೋರಾತ್ರಿ ಧರಣಿಯಲ್ಲಿ ಭಾಗಿಯಾಗಿ ಮಾತನಾಡಿ,ಬಜೆಟ್ ನಲ್ಲಿ ಯಾವುದೇ ತೆರಿಗೆ ತೋರಿಸದೆ ಇದೀಗ ಬೆಲೆ ಏರಿಕೆ ಮಾಡಲಾಗ್ತಿದೆ. ಐದು ಗ್ಯಾರಂಟಿಗಾಗಿ ಕರ್ನಾಟಕದ ಮನೆ ಮನೆ ಲೂಟಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ಎಲ್ಲ ಸಚಿವರು ಅಂಗಡಿ ತೆರೆದಿದ್ದಾರೆ ಎಂದು ಕಿಡಿ ಕಾರಿದರು.
ನಮ್ಮ ಸರ್ಕಾರದ ಅವಧಿಯಲ್ಲಿ ಸುಳ್ಳು ಆರೋಪ ಮಾಡಿದ್ದ 40% ಕಮೀಷನ್ ಆರೋಪಕ್ಕೆ ಸಾಕ್ಷಿ ಇಲ್ಲ. ಆದರೆ ಕಾಂಗ್ರೆಸ್ ಸರ್ಕಾರ 60% ಕಮಿಷನ್ ಪಡೆದುಕೊಳ್ಳುತ್ತಿದೆ. ಸ್ಮಾರ್ಟ್ ಮೀಟರ್‌ನಲ್ಲಿ 15,000 ಕೋಟಿ ರೂ. ಹಗರಣ ನಡೆದಿದೆ. ಸಿದ್ದರಾಮಯ್ಯ ಹೆಸರಿಗೆ ಮಾತ್ರ ಮುಖ್ಯಮಂತ್ರಿ, ಆದರೆ ನಿಜವಾದ ಅಧಿಕಾರ ಬೇರೆಡೆ ಇದೆ ಎಂದರು.