ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ. ಸಾಂಪ್ರದಾಯಿಕವಾಗಿ, ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಹಲವೆಡೆ ಧಾರ್ಮಿಕ ಸ್ಥಳಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ, ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿಲ್ಲದಿರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.