ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆ ಸಮಯದಲ್ಲಿ ಎಷ್ಟೋ ವಿದ್ಯಾರ್ಥಿಗಳು ಕ್ವೆಶ್ಚನ್ ಪೇಪರ್ ಲೀಕ್ ಆಗುತ್ತಿದೆಯಾ ಎಂದು ಚೆಕ್ ಮಾಡುತ್ತಿರುತ್ತಾರೆ. ಆದರೆ ಆನ್‌ಲೈನ್ ಸಿಗೋ ಪ್ರಶ್ನೆಪತ್ರಿಕೆಗಳು ಫೇಕ್ ಅನ್ನೋದು ನೆನಪಿರಲಿ.
ಯಾವುದೋ ಒಂದು ಪ್ರಶ್ನೆಪತ್ರಿಕೆಯನ್ನು ಸಂಪೂರ್ಣ ಓದಿ ಹೋಗಿ ಎಕ್ಸಾಂ ಸೆಂಟರ್‌ನಲ್ಲಿ ಮತ್ತೊಂದು ಪ್ರಶ್ನೆಪತ್ರಿಕೆ ಬಂದರೆ ನಿಮ್ಮ ಸ್ಥಿತಿ ಹೇಗೆ ಇರುತ್ತದೆ ಊಹೆ ಮಾಡಿ..
ಪರೀಕ್ಷೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ದಿಕ್ಕು ತಪ್ಪಿಸಲು ಕಿಡಗೇಡಿಗಳು ಮುಂದಾಗಿದ್ದಾರೆ. ಪ್ರತಿ ದಿನ ಸಾಮಾಜಿಕ ಜಾಲತಾಣಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ನಕಲಿ ಪ್ರಶ್ನೆಪತ್ರಿಕೆಗಳನ್ನು ವೈರಲ್ ಮಾಡುತ್ತಿದ್ದಾರೆ.
ಸುಳ್ಳು ಪ್ರಶ್ನೆ ಪತ್ರಿಕೆಗಳನ್ನು ವೈರಲ್ ಮಾಡುವ ವಿಚಾರವನ್ನು ಖಾಸಗಿ ಶಾಲೆಗಳ ಒಕ್ಕೂಟ ಈಗಾಗಲೇ ಶಿಕ್ಷಣ ಇಲಾಖೆಯ ಗಮನಕ್ಕೆ ತಂದಿದೆ. ಆದರೂ ಕ್ರಮ ಕೈಗೊಂಡಿಲ್ಲ. ಹೀಗಾಗಿ ಶಾಲೆಗಳು ಹಾಗೂ ಪೋಷಕರು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, ಸಾಮಾಜಿಕ ಜಾಲತಣದಲ್ಲಿನ ಕಿಡಗೇಡಿಗಳನ್ನು ಮಟ್ಟಹಾಕುವಂತೆ ಒತ್ತಾಯ ಮಾಡಿದ್ದಾರೆ. ಸುಳ್ಳು ಪ್ರಶ್ನೆ ಪತ್ರಿಕೆಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಮೋಸ ಮಾಡಿ ಮಕ್ಕಳ ಭವಿಷ್ಯದ ಜೊತೆ ಚೆಲ್ಲಟವಾಡುತ್ತಿರುವ ಕಿಡಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪತ್ರ ಬರೆದು ಮನವಿ ಮಾಡಲಾಗಿದೆ ಎನ್ನಲಾಗಿದೆ.