ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಅಧಿಕೃತವಾಗಿ ಐತಿಹಾಸಿ ಬಸವನಗುಡಿಯ ಕಡಲೆಕಾಯಿ ಪರಿಷೆ ಆರಂಭವಾಗಿದೆ.
ಇಂದು ಪರಿಷೆಗೆ ಅಧಿಕೃತ ಚಾಲನೆ ಸಿಗಲಿದೆ. ಈ ಬಾರಿ ಪ್ಲಾಸ್ಟಿಕ್ ಮುಕ್ತ ಪರಿಷೆ ನಡೆಸಲಾಗುತ್ತದೆ. ಪರಿಷೆಗೆ ಏಳರಿಂದ ಎಂಟು ಲಕ್ಷ ಮಂದಿ ಭಾಗಿಯಾಗುವ ಸಾಧ್ಯತೆ ಇದೆ. ಇನ್ನು ಸಾವಿರಾರೂ ಮಳಿಗೆಗಳಿದ್ದರೂ ಈ ಬಾರಿ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿಲ್ಲ.
ಹೋಮ್‌ಗಾರ್ಡ್ ಸೇರಿ ಒಟ್ಟಾರೆ 600 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು, ಜನರಿಗೆ ಪ್ರಸಾದ ವ್ಯವಸ್ಥೆಯನ್ನೂ ಮಾಡಲಾಗಿದೆ.