ಗುಜರಾತ್ ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ: ಪಕ್ಷದ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ. ಒಂದು ಸಾರ್ವಜನಿಕರೊಂದಿಗೆ ಇದ್ದರೆ, ಇನ್ನೊಂದು ಸಾರ್ವಜನಿಕರಿಂದ ದೂರವಿರುತ್ತದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರು ಮತ್ತು ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮದೇ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಗುಜರಾತ್ ನಲ್ಲಿ ಕಾಂಗ್ರೆಸ್ ನಾಯಕರು ಜನರಿಗೆ ನಿರ್ದೇಶನ ನೀಡುವಲ್ಲಿ ವಿಫಲರಾಗಿದ್ದಾರೆ. ಗುಜರಾತ್ ರಾಜಕೀಯ ಮತ್ತು ಇಲ್ಲಿನ ಸರ್ಕಾರದ ಕಾರ್ಯವೈಖರಿಗೆ ಸಂಬಂಧಿಸಿದ ಹಲವು ವಿಷಯಗಳು ನನ್ನ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!