ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಯಾದ ಕೂಡಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.