SHOCKING | ‘ಶಾಲೆಯಲ್ಲಿ ಬಾಂಬ್ ಇದೆ’ ಬೆಂಗಳೂರಿನ ಖಾಸಗಿ ಶಾಲೆಗೆ ಬೆದರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿ ಶಾಲೆಗೆ ಬೆದರಿಕೆ ಸಂದೇಶ ಬಂದಿದೆ.

ಶಾಲೆಯಲ್ಲಿ ಬಾಂಬ್ ಇದೆ ಎನ್ನುವ ಇ-ಮೇಲ್ ಬಂದಿದ್ದು, ತಕ್ಷಣವೇ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ. ಬಾಂಬ್ ಸ್ಕ್ವಾಡ್ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು. ಪರಿಶೀಲನೆ ನಡೆಸುತ್ತಿದ್ದಾರೆ.

ಇದೇ ಶಾಲೆಯನ್ನು ದುಷ್ಕರ್ಮಿಗಳು ಟಾರ್ಗೆಟ್ ಮಾಡಿರುವುದು ಇದೇ ಮೊದಲಲ್ಲ, ಈ ಹಿಂದೆಯೂ ಬಾಂಬ್ ಇದೆ ಎನ್ನುವ ಬೆದರಿಕೆ ಮೇಲ್ ಬಂದಿತ್ತು. ಇದೀಗ ಮತ್ತೆ ಇದೇ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!