ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಮ್ಮ ಮುಂದೆ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಆದರೆ ನನ್ನ ವಜಾ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.
ಈ ಘಟನೆ ಬಳಿಕ ಮೊದಲ ಬಾರಿಗೆ ಕೆಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮಾಜಿ ಸಚಿವನಾಗಿ ಮುಂದೆ ಬಂದು ನಿಂತಿದ್ದೇನೆ. ಮಾಜಿ ಸಚಿವ ಎಂದು ಕರೆಯಿಸಿಕೊಳ್ಳುವುದಕ್ಕೆ ನನಗೆ ಸಂತೋಷವಾಗುತ್ತಿದೆ ಎಂದಿದ್ದಾರೆ. ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕಾಶ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಎಲ್ಲಾ ಸಚಿವರ ಜೊತೆ ಸೇರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಸಂಪುಟದಿಂದ ನನ್ನ ವಜಾಗೊಳಿಸಿದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಪಿತೂರಿ ಮಾಡಿ ವಜಾ ಮಾಡಲಾಗಿದೆ. ಇದರ ಹಿಂದೆ ಏನೆಲ್ಲಾ ಆಗಿದೆ ಅನ್ನೋ ಮಾಹಿತಿಯೂ ನನಗಿದೆ. ಯಾರೆಲ್ಲೂ ಇದ್ದಾರೆ ಅನ್ನೋ ಮಾಹಿತಿಯೂ ಇದೆ. ನನ್ನ ಬಳಿ ಇರುವ ಈ ಷಡ್ಯಂತ್ರ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.
ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.
ನನ್ನ ಹೇಳಿಕೆ, ನನ್ನ ಬಗ್ಗೆ ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ. ಆಗಿರುವ ತಪ್ಪು ಗ್ರಹಿಕೆಯನ್ನು ನಿವಾರಿಸುವ ಪ್ರಯತ್ನ ಮಾಡುತ್ತೇನೆ. ನಾನೇ ಖುದ್ದು ದೆಹಲಿಗೆ ತೆರಳಿ ರಾಹುಲ್ ಗಾಂಧಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ. ಸದ್ಯ ಏನೇ ಮಾತನಾಡಿದರೂ ತಪ್ಪು ಸಂದೇಶ ಹೋಗಬಾರದು. ನಾವು ಪಕ್ಷಕ್ಕೆ ಬದ್ಧರಾಗಿದ್ದೇವೆ. ರಾಹುಲ್ ಗಾಂಧಿ ನಮ್ಮ ನಾಯಕರು ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.