Wednesday, November 30, 2022

Latest Posts

ಆದಷ್ಟು ಬೇಗ ಸೂಕ್ತ ತೀರ್ಪು ಬರುವ ಅವಶ್ಯಕತೆ ಇದೆ: ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ

ಹೊಸದಿಗಂತ ವರದಿ ಹುಬ್ಬಳ್ಳಿ:

ಹಿಜಾಬ್ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದು, ಅಲ್ಲಿಂದ ಆದಷ್ಟು ಬೇಗ ಸೂಕ್ತ ತೀರ್ಪು ಬರುವುದು ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು, ಹಿಜಾಬ್ ವಿಚಾರ ಜಗತ್ತಿನಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗೆ ಇರಾನಾ ಹಾಗೂ ಇರಾಖ ದೇಶದಲ್ಲಿಯೂ ಸಹ ಮುಸ್ಲಿಂ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ವಿರೋಧಿಸುತ್ತಿದ್ದಾರೆ. ಹೀಗಾಗಿ ದೇಶದಲ್ಲಿ ಆದಷ್ಟೂ ಬೇಗ ಹಿಜಾಬ ವಿಚಾರ ಅಂತ್ಯ ಹಾಡಬೇಕು ಎಂದರು.

ಮೋದಿಯವರು ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ: ಐದು ವರ್ಷ ಮುಖ್ಯ ಮಂತ್ರಿಯಾದವರು ಹಾಗೂ ಪ್ರಸ್ತುತ ವಿರೋಧ ಪಕ್ಷದ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರಿಗೆ ಹೇಗಿರಬೇಕು ಎಂದು ಹೇಳುವ ಪರಿಸ್ಥಿತಿ ಬಂದಿದೆ. ಜವಾಬ್ದಾರಿ ಸ್ಥಾನ ನಿಭಾಯಿಸಿದವರು ಈ ರೀತಿ ಮಾತನಾಡುವುದ ಸರಿಯಲ್ಲ ಎಂದರು.

ಪ್ರಧಾನಿ‌ ಮೋದಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ಹಗುರುವಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಕ್ಷೋಭೆ ತರುವಂತದಲ್ಲ. ಅವರಿಗೆ ಅಪಮಾನ ಮಾಡುವುದು ದೇಶದ ಜನರಿಗೆ ಅಪಮಾನ ಮಾಡಿದ ಹಾಗೆ ಎಂದು ಹೇಳಿದರು.

ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ: ಕೆಲವು ಕಡೆ ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆಗಳಾಗುತ್ತಿವೆ. ಇದರಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ರಾಜ್ಯ ಸರ್ಕಾರ ಕಾನೂನುನಿನ ಚೌಕಟ್ಟಿನಲ್ಲಿ ಸೂಕ್ತವಾಗಿ ನಿಭಾಯಿಸುತ್ತದೆ ಎಂದು ತಿಳಿಸಿದರು.

ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರ ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕ್ರಮಕೈಗಳಬೇಕು ಎಂದು ನಾನು ಆಗ್ರಹಿಸುತ್ತೆ. ಕೆಲ ಏಕಾಏಕಿ ಘಟನೆಗಳಿಂದ ಇಂತಹ ಕೃತ್ಯಗಳಾಗುತ್ತವೆ. ಇದರಿಂದ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದು ಭಾವಿಸುವುದು ಸರಿಯಲ್ಲ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!