KRS ಅಣೆಕಟ್ಟೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಇದೆ: ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆ.ಆರ್.ಎಸ್ ಅಣೆಕಟ್ಟಿನ ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡುವ ಕುರಿತು ತಜ್ಞರ ಅಭಿಪ್ರಾಯವು ಅಂತಿಮವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ಅಣೆಕಟ್ಟಿಗೆ ಹಾನಿಯಾಗದಂತೆ ತಡೆಯಲು ಮೊದಲಿಗಿಂತ ಹೆಚ್ಚಿನ ಜವಾಬ್ದಾರಿ ಈಗ ಇದೆ ಎಂದು ನ್ಯಾಯಾಲಯ ಹೇಳಿದೆ. ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಮಂಚಮ್ಮದೇವಿ ಸ್ಟೋನ್ ಕ್ರಶ‌ರ್ ಹಾಗೂ ಎಂ ಸ್ಯಾಂಡ್ ಮಾಲೀಕರು ಕ್ರಷರ್ ಬಳಕೆಗೆ ಅನುಮತಿ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠದಲ್ಲಿ ನಡೆಯಿತು.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಕೆಆರ್‌ಎಸ್ ಜಲಾಶಯದ 20 ಕಿ.ಮೀ ಮತ್ತು ಆಚೆಗಿನ ಗಣಿಗಾರಿಕೆ ಮತ್ತು ಕಲ್ಲು ಸ್ಫೋಟದ ಚಟುವಟಿಕೆಗಳಿಗೆ ಸಂಬಂಧಿಸಿದ ವಿವಾದಗಳನ್ನು ಪರಿಹರಿಸಲು ಕರ್ನಾಟಕ ರಾಜ್ಯ ಜಲಾಶಯದ ಸುರಕ್ಷತಾ ಮಂಡಳಿಗೆ ಮನವಿಯನ್ನು ರವಾನಿಸಬೇಕು. ಸಮಿತಿಯ ತೀರ್ಮಾನವೇ ಅಂತಿಮ ಎಂದು ನಿರ್ದೇಶನ ನೀಡಿ ಅರ್ಜಿ ವಿಲೇವಾರಿ ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!