ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.