ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ದೇಶದಲ್ಲಿ ಇಂಧನ ಪೂರೈಕೆಯಲ್ಲಿ ಅಲ್ಪ ಅಡೆತಡೆಗಳಾಗಿದ್ದು, ಇದನ್ನೇ ಅಸ್ತ್ರವಾಗಿ ಬಳಸಿಕೊಂಡು ಶಿವಸೇನೆ (ಠಾಕ್ರೆ ಬಣ) ಸಂಸದ ಸಂಜಯ್ ರಾವತ್ ಇಂದು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿದೆ ಮಾತನಾಡಿದ ಸಂಜಯ್ ರಾವತ್, ಯುದ್ದದಿಂದ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಾಗಿದ್ದು, ಆದರೆ ಕೇಂದ್ರ ಸರಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಟೀಕಿಸಿದರು.
ದೇಶದಲ್ಲಿ ಇಂಧನ ಕೊರತೆ ಇದ್ದು, ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಇರುವುದು ದುಃಖಕರ ಸಂಗತಿಯಾಗಿದೆ. ಜನರು ಸರಕಾರದ ಮಾತನ್ನು ನಂಬಲು ಹೋಗಬೇಡಿ ಎಂದು ಟೀಕಿಸಿದರು.
ಈಗಾಗಲೇ ಪಾಕಿಸ್ತಾನದಲ್ಲಿ ಲಾಕ್ಡೌನ್ ಪರಿಸ್ಥಿತಿ ಎದುರಾಗಿದ್ದು, ಈ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಭಾರತದಲ್ಲಿ ಅದೇ ಪರಿಸ್ಥಿತಿ ಎದುರಾಗಬಹುವುದು . ಹೀಗಾಗಿ ಜನತೆ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು ಎಂದು ಸಂಜಯ್ ರಾವತ್ ಹೇಳಿದ್ದಾರೆ.



