ಕಾಂಗ್ರೆಸ್ ಸರಕಾರದಲ್ಲೂ ಇದೆ ಭ್ರಷ್ಟಾಚಾರ: ಕೆಂಪಣ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಐದೂವರೆ ತಿಂಗಳಲ್ಲಿ ಕಾಮಗಾರಿ ಬಿಲ್ ಪೇಮೆಂಟ್​ನಲ್ಲಿ ಅವ್ಯವಹಾರ (Corruption in Payment) ನಡೆಯುತ್ತಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಗಮನಕ್ಕೆ ತಂದಿದ್ದೇನೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna Charge) ಹೇಳಿದ್ದಾರೆ.

ಕುಮಾರಕೃಪಾ ಗೆಸ್ಟ್‌ ಹೌಸ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲೂ (Siddaramaiah Government) ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದರು.

ಭ್ರಷ್ಟಾಚಾರ ಇಲ್ಲ ಅಂತ ಹೇಳಿದರೆ ನನ್ನಂತ ಮೂರ್ಖ ಇನ್ನೊಬ್ಬರಿಲ್ಲ. ಹಿಂದೆಯೂ ಇತ್ತು, ಈಗಲೂ ಇದೆ. ಅದನ್ನು ತಡೆಗಟ್ಟಬೇಕು. ಈ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ. ಆದರೆ ದೊಡ್ಡ ಮಟ್ಟದಲ್ಲಿ ಕಂಡುಬರುತ್ತಿಲ್ಲ. ಈಗ ಯಾವುದೇ ಪ್ರಮುಖ ಕೆಲಸಗಳು ಆಗಿಲ್ಲ. ಹಾಗಾಗಿ ಆರೋಪ ಮಾಡಲ್ಲ. ಪ್ರಮುಖ ಕಾಮಗಾರಿ ನಡೆದರೆ ಆಗ ಭ್ರಷ್ಟಾಚಾರದ ಬಗ್ಗೆ ಗೊತ್ತಾಗಲಿದೆ ಎಂದರು.

ಈ ವೇಳೆ ಐಟಿ ದಾಳಿಗೆ ಒಳಗಾದ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮೇಲಿನ‌ ಆರೋಪ ಸುಳ್ಳು ಎಂದು ಎಂದು ಕೆಂಪಣ್ಣ ವಾದಿಸಿದ್ದು, ಅಂಬಿಕಾಪತಿ ಏನು ಎನ್ನುವುದು ನನಗೆ ಗೊತ್ತು. ನಾನೂ ಅಂಬಿಕಾಪತಿ 45ವರ್ಷದಿಂದ ಸ್ನೇಹಿತರು. ಅಂಬಿಕಾಪತಿ ಮೇಲಿನ‌ ಆರೋಪ ಸುಳ್ಳು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!