ಹೊಸದಿಗಂತ ವರದಿ ಹುಬ್ಬಳ್ಳಿ:
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯದ ಕಾರಣ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನವಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಕಿಡಿಕಾರಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ನಾಯಕರ ಭ್ರಷ್ಟಾಚಾರ ಹಾಗೂ ದುರಾಡಳಿತ ಕಂಡು ಕಾಂಗ್ರೆಸ್ ಶಾಸಕರು ಭ್ರಮನಿರಸರಾಗಿದ್ದಾರೆ ಎಂದರು.
ಬಸವರಾಜ ಬೊಮ್ಮಾಯಿ ಶಿಗ್ಗಾವಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದ್ದರಿಂದ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮತ ಅಂತರದಿಂದ ಅವರ ಮಗ ಗೆಲುವು ಸಾಧಿಸಲಿದ್ದಾನೆ ಎಂದು ಭರವಸೆ ವ್ಯಕ್ತಪಡಿಸಿದರು.
ಹಿಂದೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ನನ್ನ ಹೆಸರು ಸಹ ಮುಂಚೂಣಿಯಲ್ಲಿತ್ತು. ನಾನು ಕೇಂದ್ರದ ವರಿಷ್ಠರಿಗೆ ಸ್ಪರ್ಧಿಸಲ್ಲ ಎಂದು ಹೇಳಿ, ಸ್ಥಳೀಯರಿಗೆ ಟಿಕೆಟ್ ನೀಡಲು ಮನವಿ ಮಾಡಿದೆ ಎಂದರು.
ಒಂದು ವಾರಗಳ ಕಾಲ ಶಿಗ್ಗಾವಿಯಲ್ಲಿ ಉಳಿದು ಪಕ್ಷದ ಅಭ್ಯರ್ಥಿ ಭರತ್ ಬೊಮ್ಮಾಯಿ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.