ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್‌ಗೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಗೌಡ ಹಾಗೂ ಉಳಿದ ಆರೋಪಿಗಳ ವಿಚಾರಣೆ ನಡೆಯುತ್ತಿದೆ.
ಈ ಮಧ್ಯೆ ಆರೋಪಿಗಳ ತನಿಖೆ ನಡೆಸುತ್ತಿರುವ ಸ್ಥಳ, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಶಾಮಿಯಾನ ಹಾಕಲಾಗಿತ್ತು. ಇದು ಭಾರೀ ಚರ್ಚೆಯನ್ನು ಹುಟ್ಟಿಹಾಕಿತ್ತು. ಇದೀಗ ಶಾಮಿಯಾನ ಹಾಕಿರುವ ಹಿಂದಿನ ಕಾರಣ ಬಯಲಾಗಿದೆ.
ಶಾಮಿಯಾನದ ಸೈಡ್ ವಾಲ್ ಹಾಕಿಸಿದ್ದು ನಟ ದರ್ಶನ್ಗಾಗಿ. ಪೊಲೀಸರ ಮುಂದೆ ದರ್ಶನ್ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಶಾಮಿಯಾನದ ಸೈಡ್ ವಾಲ್ ಹಾಕಲಾಗಿದೆ. ಸಾರ್ ನನಗೆ ಒಂದೇ ಕಡೆ ಕುಳಿತು ಇರಲು ಆಗ್ತಾ ಇಲ್ಲ. ನಾನು ವಾಕ್ ಮಾಡಬೇಕು. ನನ್ನ ಬಾಡಿಯನ್ನು ಫ್ರೀ ಮಾಡಿ ರಿಲ್ಯಾಕ್ಸ್ ಮಾಡಬೇಕು. ಸಿಗರೇಟ್ ಇಲ್ಲವಾದ್ರೆ ನನಗೆ ಕೈನಡುಗುತ್ತದೆ. ಠಾಣೆ ಒಳಗೆ ತಿರುಗಾಡಲು ಜಾಗ ಇಲ್ಲ. ಅದಕ್ಕೆ ಸೈಡ್ ವಾಲ್ ಹಾಕಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.