ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಇಸ್ಕಾನ್ ದೇಗುಲದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ಕೃಷ್ಣ ಜನ್ಮಾಷ್ಟಮಿ ಅದ್ದೂರಿಯಿಂದ ನೆರೆವೇರುತ್ತಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಜನರು ಕೃಷ್ಣನನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ. ಕೃಷ್ಣನ ಮುಂದೆ ನೃತ್ಯ ಮಾಡುತ್ತ, ಭಜನೆ ಮಾಡುತ್ತಾ ಭಕ್ತಿಯಲ್ಲಿ ಮುಳುಗುತ್ತಿದ್ದಾರೆ. ದೇವಸ್ಥಾನದ ಸುತ್ತ ಹಬ್ಬದ ವಾತಾವರಣ ಮನೆ ಮಾಡಿದೆ.
ಈ ಬಾರಿ ಇಸ್ಕಾನ್ ದೇವಸ್ಥಾನದಲ್ಲಿ ದಕ್ಷಿಣ ಭಾರತದ ಶೈಲಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಅದ್ದೂರಿಯಿಂದ ಬರಮಾಡಿಕೊಳ್ಳುತ್ತಿದ್ದು, ಇಂದು ಬೆಳ್ಳಗ್ಗೆ ಶ್ರೀ ಕೃಷ್ಣನಿಗೆ ಪಂಚಾಭಿಷೇಕ, ಪುಷ್ಪಭಿಷೇಕ, ವಜ್ರಾಲಂಕಾರವನ್ನ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರುಶನ ಪಡೆದಿದ್ದಾರೆ. ಶ್ರೀ ಕೃಷ್ಣ ರೋಹಿಣಿ ನಕ್ಷತ್ರ ಮಧ್ಯರಾತ್ರಿ ಹುಟ್ಟಿರುವ ಕಾರಣ ನಿನ್ನೆ ಮಧ್ಯರಾತ್ರಿ ಒಂದು ಗಂಟೆಯವರೆಗೂ ವಿಶೇಷ ಪೂಜೆ ಹಾಗೂ ಭಜನೆಗಳನ್ನ ಹಮ್ಮಿಕೊಳ್ಳಲಾಗಿತ್ತು.