ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತರಿಗೆ ಅನ್ಯಾಯ ಆಗ್ತಿದೆ ಅಂತ ಆರೋಪಿಸಿ ರಾಜೀನಾಮೆ ನೀಡಿದ್ದ ದಲಿತ ಪ್ರೊಫೆಸರ್‌ಗಳ ಪತ್ರಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಸ್ಪಷ್ಟನೆ ನೀಡಿದೆ.
ಇಲ್ಲಿ ಯಾವುದೇ ದಲಿತ ವಿರೋಧಿ ನೀತಿ ಮಾಡ್ತಿಲ್ಲ. ಜೊತೆಗೆ ಯಾವೆಲ್ಲ ಕ್ರಮಗಳು ಆಗಿವೆ ಅಂತ ಸ್ಪಷ್ಟನೆ ನೀಡಲಾಗಿದೆ ಎಂದು ಪತ್ರದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಹೇಳಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದ್ದು, ದಲಿತ ವಿರೋಧಿ ನೀತಿ ಅನುಸರಿಸಿದೆ ಎಂಬ ವಿಷಯವು ಸತ್ಯಕ್ಕೆ ದೂರವಾಗಿದೆ . ಶಾಸನಬದ್ಧ ಹುದ್ದೆಗಳ ನೇಮಕಾತಿಯಲ್ಲಿ ಬಹುಸಂಖ್ಯಾತ ದಲಿತರಿಗೆ ತಾರತಮ್ಯ ನೀತಿ, ಸರ್ಕಾರದ ಮೀಸಲಾತಿ ನಿಯಮಗಳ ಉಲ್ಲಂಘನೆ ಮತ್ತು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಕುರಿತು ಬೆಂಗಳೂರು ವಿವಿ ಪತ್ರದ ಮೂಲಕ ಉತ್ತರಿಸಿದೆ.